Wednesday, June 3, 2026
Homeತಾಜಾ ಸುದ್ದಿರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಎ1 ಆರೋಪಿ ಪವಿತ್ರ ಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಎ1 ಆರೋಪಿ ಪವಿತ್ರ ಗೌಡ

- Advertisement -
- Advertisement -

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾಳೆ. ಬೆಂಗಳೂರಿನ ಸಿಸಿಹೆಚ್ 57 ನ್ಯಾಯಾಲಯಕ್ಕೆ ಜಾಮೀನಿಗಾಗಿ ಪವಿತ್ರ ಅರ್ಜಿ ಸಲ್ಲಿಸಿದ್ದಾಳೆ.

ಇನ್ನು ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಸಿಸಿಹೆಚ್ 57 ನ್ಯಾಯಾಲಯ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿಕೆ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಆಗಸ್ಟ್ 22ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದರು.ವಿಚಾರಣೆಯ ಸಂದರ್ಭದಲ್ಲಿ ಸಿಸಿಹೆಚ್ 57 ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿದರು. ಪ್ರಕರಣ ಮತ್ತೊಬ್ಬ ಆರೋಪಿ ಅನು ಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾನೆ.

- Advertisement -

Latest News

error: Content is protected !!