Sunday, May 5, 2024
Homeಕರಾವಳಿಪುತ್ತೂರು: ಕೃಷಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಫ್ಯಾಮಿಲಿ ಟೂರ್ : ಅಲಂಕಾರು ಸೊಸೈಟಿ ಆಡಳಿತ ಮಂಡಳಿ...

ಪುತ್ತೂರು: ಕೃಷಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಫ್ಯಾಮಿಲಿ ಟೂರ್ : ಅಲಂಕಾರು ಸೊಸೈಟಿ ಆಡಳಿತ ಮಂಡಳಿ ವಿರುದ್ಧ ಎಎಪಿ ಆರೋಪ

spot_img
- Advertisement -
- Advertisement -

ಪುತ್ತೂರು:ಕೃಷಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಕಡಬ ತಾಲೂಕಿನ ಆಲಂಕಾರು ಪ್ರಾಥಮಿಕ ಸಹಕಾರಿ ಸಂಘದ ಆಡಳಿತ ಮಂಡಳಿ ವಿರುದ್ಧ ಫ್ಯಾಮಿಲಿ ಟೂರ್ ಕೈಗೊಂಡಿರುವ ಆರೋಪ ವ್ಯಕ್ತವಾಗಿದೆ.

ಅಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಉತ್ತರ ಭಾರತದಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ‌‌.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಉತ್ತರ ಭಾರತಕ್ಕೆ ಅಧ್ಯಯನ ಪ್ರವಾಸ ಹೋಗಿದ್ದಾರೆ. ಆದರೆ ಪ್ರವಾಸಕ್ಕೆ ಸಹಕಾರಿ ಸಂಘದ ಸದಸ್ಯರಲ್ಲದೇ ತಮ್ಮ ಕುಟುಂಬದ ಸದಸ್ಯರನ್ನೂ ಕರೆದೊಯ್ದಿದ್ದರು ಎಂದು ಆರೋಪಿಸಿದ್ದಾರೆ.

ಸಹಕಾರ ಸಂಘದ ಹಣದಲ್ಲಿ ಪತಿ-ಪತ್ನಿಯರು ಪ್ರವಾಸ ನಡೆಸಿ ಬಂದಿರುವ ಫೋಟೋಗಳು ಕೂಡಾ ವೈರಲ್ ಆಗಿವೆ ಎಂದು ಹೇಳಿರುವ ಪುರುಷೋತ್ತಮ ಕೋಲ್ಪೆ, ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಅಧ್ಯಯನ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಾದ ಜನಾರ್ಧನ ಬಂಗೇರ ಮತ್ತು ಡಾ. ವಿಷುಕುಮಾರ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!