Saturday, April 27, 2024
Homeಕ್ರೀಡೆBIG BREAKING: ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಎಬಿ ಡಿ ವಿಲಿಯರ್ಸ್...!

BIG BREAKING: ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಎಬಿ ಡಿ ವಿಲಿಯರ್ಸ್…!

spot_img
- Advertisement -
- Advertisement -

ನವದೆಹಲಿ:ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್(ABD) ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.ಬಹುಮುಖ ಪ್ರತಿಭೆಯ ಬ್ಯಾಟ್ಸ್‌ಮನ್ ABD 2018 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಎಬಿಡಿ (ABD) ಈ ಹಿಂದೆಯೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದರು. ಆದರೆ, ಇತರೆ ದೇಶೀಯ ಟೂರ್ನಮೆಂಟ್​ಗಳಲ್ಲಿ ಕಣಕ್ಕಿಳಿಯುತ್ತಿದ್ದರು. ಪ್ರಮುಖವಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪರವಾಗಿ ಅನೇಕ ವರ್ಷಗಳಿಂದ ಆಡುತ್ತಿದ್ದಾರೆ. ಆದರೆ, ಸದ್ಯ ಇವರು ಇನ್ನುಮುಂದೆ ಯಾವುದೇ ಮಾದರಿಯ ಕ್ರಿಕೆಟ್​ನಲ್ಲಿ ಆಡುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಅವರೇ ಸ್ವತಃ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದು, ‘ಇದು ನಂಬಲಾಗದ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಶುದ್ಧ ಆನಂದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ಈಗ 37 ನೇ ವಯಸ್ಸಿನಲ್ಲಿ ಜ್ವಾಲೆಯು ಇನ್ನು ಮುಂದೆ ಪ್ರಕಾಶಮಾನವಾಗಿ ಉರಿಯುವುದಿಲ್ಲ’ ಎಂದು ದಕ್ಷಿಣ ಆಫ್ರಿಕಾದ ಆಟಗಾರ ಟ್ವೀಟ್ ಮಾಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಈ ಬಗ್ಗೆ ಟ್ವೀಟ್ ಮಾಡಿದೆ.

37ರ ಹರೆಯದ ಎಬಿಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಈವರೆಗೆ 114 ಟೆಸ್ಟ್, 228 ಏಕದಿನ ಮತ್ತು 78 ಟಿ-20 ಪಂದ್ಯಗಳನ್ನಾಡಿದ್ದಾರೆ. ಸುಮಾರು 17 ವರ್ಷಗಳ ಕಾಲ ವೃತ್ತಿ ಬದುಕನ್ನು ಕ್ರಿಕೆಟ್ ಮೈದಾನದಲ್ಲಿ ಕಳೆದಿರುವ ಸ್ಫೋಟಕ ಬ್ಯಾ ಡಿವಿಲಿಯರ್ಸ್, ನಿವೃತ್ತಿ ನೀಡಲು ಇದು ಸಕಾಲ ಎಂದಿದ್ದಾರೆ.

ಐಪಿಎಲ್​ನಲ್ಲಿ ಇವರು 184 ಪಂದ್ಯಗಳನ್ನು ಆಡಿದ್ದು 5162 ರನ್ ಬಾರಿಸಿದ್ದಾರೆ. ಒಟ್ಟು ಮೂರು ಶತಕ ಮತ್ತು 40 ಅರ್ಧಶತಕ ಕೂಡ ಸಿಡಿಸಿದ್ದಾರೆ. 251 ಸಿಕ್ಸರ್, 413 ಬೌಂಡರಿ ಬಾರಿಸಿದ ಸಾಧನೆ ಇವರದ್ದಾಗಿದೆ.

- Advertisement -
spot_img

Latest News

error: Content is protected !!