Sunday, April 28, 2024
Homeಕರಾವಳಿಮೀನುಗಾರಿಕೆಯಿಂದ ವಾಪಸ್ಸಾಗುತ್ತಿದ್ದ 7 ಮಂದಿ ಮೀನುಗಾರರ ಅಪಹರಣ; ಲಕ್ಷಾಂತರ ರೂ. ಮೌಲ್ಯದ ಮೀನು, ಡಿಸೇಲ್ ದರೋಡೆ

ಮೀನುಗಾರಿಕೆಯಿಂದ ವಾಪಸ್ಸಾಗುತ್ತಿದ್ದ 7 ಮಂದಿ ಮೀನುಗಾರರ ಅಪಹರಣ; ಲಕ್ಷಾಂತರ ರೂ. ಮೌಲ್ಯದ ಮೀನು, ಡಿಸೇಲ್ ದರೋಡೆ

spot_img
- Advertisement -
- Advertisement -

ಮಲ್ಪೆ: ಮೀನುಗಾರಿಕೆಯಿಂದ ವಾಪಸ್ಸಾಗುತ್ತಿದ್ದ ಆಳಸಮುದ್ರ ಬೋಟನ್ನು ತಡೆದು ನಿಲ್ಲಿಸಿ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ಸಹಿತ 7 ಮಂದಿ ಮೀನುಗಾರರನ್ನು 25 ಜನರ ತಂಡ ಅಪಹರಿಸಿದ ಘಟನೆ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ನಡೆದಿದೆ.

ಅಪಹರಣವಾದ ಬೋಟ್ ಮಲ್ಪೆಯ ಚೇತನ್ ಸಾಲ್ಯಾನ್ ಅವರಿಗೆ ಸೇರಿದ ಕೃಷ್ಣನಂದನವಾಗಿದ್ದು, ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ಅದರಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಗರಾಜ್ ಹರಿಕಾಂತ್, ನಾಗರಾಜ್ ಎಚ್. ಅರುಣ್ ಹರಿಕಾಂತ ಅಂಕೋಲ, ಅಶೋಕ ಕುಮಟಾ, ಕಾರ್ತಿಕ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಹ್ಮಣ್ಯ ಖಾರ್ವಿ ಅವರನ್ನು ಬಂಧನದಲ್ಲಿರಿಸಲಾಗಿದೆ.

ಬೋಟಿನ ಮೀನುಗಾರರ ಮೊಬೈಲಿಗೆ ಕರೆ ಮಾಡಿದಾಗ ಸ್ವಿಚ್‌ಆಫ್ ಅಗಿದ್ದು ಅಪಹರಣಕಾರರು ಮೀನುಗಾರರನ್ನು ಬಂಧನದಲ್ಲಿರಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!