Thursday, January 16, 2025
Homeಕರಾವಳಿಕಾಸರಗೋಡುಕಾಸರಗೋಡು ; ಅನಿವಾಸಿ ಉದ್ಯಮಿ ಅಬ್ದುಲ್ ಗಫೂರ್ ಹಾಜಿ ಕೊಲೆ ಪ್ರಕರಣ; ಮೂವರು ಮಹಿಳೆಯರು ಸೇರಿ...

ಕಾಸರಗೋಡು ; ಅನಿವಾಸಿ ಉದ್ಯಮಿ ಅಬ್ದುಲ್ ಗಫೂರ್ ಹಾಜಿ ಕೊಲೆ ಪ್ರಕರಣ; ಮೂವರು ಮಹಿಳೆಯರು ಸೇರಿ ನಾಲ್ವರು ಆರೋಪಿಗಳ ಬಂಧನ

spot_img
- Advertisement -
- Advertisement -

ಕಾಸರಗೋಡು ; ಅನಿವಾಸಿ ಉದ್ಯಮಿ ಅಬ್ದುಲ್ ಗಫೂರ್ ಹಾಜಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಮಹಿಳೆಯರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೇಲ್ಪರಂಬ ಕುಳಿಕುನ್ನುವಿನ ಶಮೀಮಾ (38), ಪತಿ ಉಬೈದ್ (40), ಪೂಚಕ್ಕಾಡ್ ನ ಅನ್ಸಿಫಾ (34) ಮತ್ತು ಮಧೂರಿನ ಆಯಿಷಾ (40) ಬಂಧಿತರು. ಆರೋಪಿಗಳನ್ನು ಕೊಲೆ ನಡೆದ ಒಂದೂವರೆ ವರ್ಷದ ಬಳಿಕ ಬೇಕಲ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಚಿನ್ನಾಭರಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಸಿ ವಾಮಚಾರದ ಹೆಸರಲ್ಲಿ ಗಫೂರ್ ಅವರಿಂದ ಬರೋಬ್ಬರಿ  596 ಪವನ್ ಚಿನ್ನಾಭರಣವನ್ನು ಆರೋಪಿಗಳು ಲಪಾಟಿಯಿಸಿದ್ದರು. ಕೆಲ ಸಮಯದ ಬಳಿಕ ಚಿನ್ನಾಭರಣವನ್ನು ಗಫೂರ್ ಹಾಜಿ  ಮರಳಿಸುವಂತೆ ಕೇಳಿದ್ದು, ಈ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

2023 ರ ಏಪ್ರಿಲ್ 14 ರಂದು ಕೊಲೆ ನಡೆದಿತ್ತು. ಕೃತ್ಯ ನಡೆದ ದಿನ ಗಫೂರ್ ಹಾಜಿ ಮಾತ್ರ ಮನೆಯಲ್ಲಿದ್ದರು. ಪತ್ನಿ ಮತ್ತು ಮಕ್ಕಳು ಸಂಬಂಧಿಕರ ಮನೆಗೆ ತೆರಳಿದ್ದರು. ಮರಳಿ ಬಂದಾಗ ಗಫೂರ್ ಮನೆಯ ಕೊನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಅಂದು ಪತ್ತೆಯಾಗಿದ್ದರು. ಅಸಹಜ ಸಾವು ಎಂದು ಪತ್ನಿ, ಮಕ್ಕಳು, ಸಂಬಂಧಿಕರು ನಂಬಿದ್ದರು. ಇದರಿಂದ ಮೃತದೇಹವನ್ನು ದಫನ ಮಾಡಲಾಗಿತ್ತು. ದಿನಗಳ ಬಳಿಕ ಗಮನಿಸಿದಾಗ ಮನೆಯಿಂದ 596 ಪವನ್ ಚಿನ್ನಾಭರಣ ನಾಪತ್ತೆಯಾಗಿರುವುದು ಮನೆಯವರ ಗಮನಕ್ಕೆ ಬಂದಿದೆ. ಈ ಬಗ್ಗೆ ಅಬ್ದುಲ್ ಗಫೂರ್ ರ ಪುತ್ರ ಅಹಮ್ಮದ್ ಮುಸಾಮ್ಮಿಲ್ ಬೇಕಲ ಠಾಣಾ ಪೊಲೀಸರಿಗೆ ಹಾಗೂ ಮುಖ್ಯಮಂತ್ರಿಗೆ ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ಬೇಕಲ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. 2023 ಏಪ್ರಿಲ್ 27 ರಂದು ಗಫೂರ್ ಹಾಜಿ ಅವರ ದೇಹವನ್ನು ಸಮಾಧಿಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಮರಣೋತ್ತರ ಪರೀಕ್ಷೆಯಲ್ಲಿ ತಲೆಗೆ ಗಾಯವಾಗಿರುವುದು ಗೊತ್ತಾಗಿದೆ. ಇದರಿಂದ ಕೊಲೆ ಎಂಬುದು ಬಯಲಾಗಿದೆ.

 ವಾಮಾಚಾರದಲ್ಲಿ ತೊಡಗಿರುವ ಶಮೀಮಾ ಹಾಗೂ ಆಕೆಯ ಉಬೈದ್ 2ನೇ ಪತಿ ಯುವಕನ ಸಾವಿನ ಹಿಂದೆ ಶಂಕೆ ಇದೆ ಎಂದು ಗಫೂರ್ ಅವರ ಪುತ್ರ ಬೇಕಲ ಪೊಲೀಸರು ಹಾಗೂ ಮುಖ್ಯಮಂತ್ರಿಗಳಿಗೆ ನೀಡಿದ ದೂರಿನ ಆಧಾರದ ಮೇಲೆ ವಿಶೇಷ ತಂಡವನ್ನು ರಚಿಸಿತ್ತು. ತನಿಖಾ ತಂಡವು ಮನೆಯವರು, ಕುಟುಂಬಸ್ಥರು, ನಾಗರಿಕರು ಹಾಗೂ ಕ್ರಿಯಾ ಸಮಿತಿ ಸೇರಿದಂತೆ 40 ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೊಳಪಡಿಸಿತ್ತು. ತನಿಖೆ ವೇಳೆ ಶಮೀಮಾಳ ಸಹಚಾರರ ಬ್ಯಾಂಕ್ ಖಾತೆಗೆ ಭಾರಿ ಮೊತ್ತದ ಹಣ ಜಮಾ ಆಗಿರುವುದು ಪೊಲೀಸರಿಗೆ ಗೊತ್ತಾಗಿದೆ. ಮೃತ ಗಫೂರ್ ಹಾಜಿ ಮತ್ತು ಶಮಿಮಾಳ ನಡುವೆ ನಡೆದ ವಾಟ್ಸಾಪ್ ಸಂದೇಶಗಳು ಪೊಲೀಸರಿಗೆ ಲಭಿಸಿದೆ. ಶಮೀಮಾ ಗಫೂರ್ ಹಾಜಿ ರವರಿಂದ ಹಿಂದೆ 10 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ಪಡೆದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದ್ದು, ಹಲವು ಪುರಾವೆಗಳು ಪೊಲೀಸರಿಗೆ ಲಭಿಸಿತ್ತು. ಗಫೂರ್ ಗಲ್ಫ್ ನಲ್ಲಿ ಹಲವಾರು ಸೂಪರ್‌ಮಾರ್ಕೆಟ್‌ಗಳು ಮತ್ತು ಇತರ ಉದ್ಯಮಗಳನ್ನು ಹೊಂದಿದ್ದರು.

- Advertisement -
spot_img

Latest News

error: Content is protected !!