Tuesday, October 13, 2026
Homeತಾಜಾ ಸುದ್ದಿಹಸೆಮಣೆ ಏರೋದಕ್ಕೆ ರೆಡಿಯಾದ್ರಾ ಅಭಿಷೇಕ್ ಅಂಬರೀಶ್: ಜ್ಯೂನಿಯರ್ ರೆಬೆಲ್ ಸ್ಟಾರ್ ಮದುವೆಯಾಗುತ್ತಿರುವ ಹುಡುಗಿ ಯಾರು?

ಹಸೆಮಣೆ ಏರೋದಕ್ಕೆ ರೆಡಿಯಾದ್ರಾ ಅಭಿಷೇಕ್ ಅಂಬರೀಶ್: ಜ್ಯೂನಿಯರ್ ರೆಬೆಲ್ ಸ್ಟಾರ್ ಮದುವೆಯಾಗುತ್ತಿರುವ ಹುಡುಗಿ ಯಾರು?

- Advertisement -
- Advertisement -

ಬೆಂಗಳೂರು;  ಜ್ಯೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ವಿವಾಹವಾಗೋದಕ್ಕೆ ರೆಡಿಯಾಗಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿ ಬರುತ್ತಿದೆ.

ಅಭಿಷೇಕ್ ಶೀಘ್ರದಲ್ಲೇ ವೈವಾಹಿಕ ಬದುಕಿಗೆ ಕಾಲಿಡಲಿದ್ದು, ಡಿಸೆಂಬರ್ 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ವಿವಾಹ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು ಮೂಲದ ಹುಡುಗಿ ಜೊತೆ ಅಭಿಷೇಕ್ ವಿವಾಹ ನಿಶ್ಚಿತಾರ್ಥವಾಗಲಿದ್ದು, ಇದು ಅರೆಂಜ್ ಮ್ಯಾರೇಜ್ ಎಂದು ಹೇಳಲಾಗುತ್ತಿದೆ. ಈಗಾಗಲೇ ಉಭಯ ಕುಟುಂಬಗಳು ಮಾತುಕತೆ ನಡೆಸಿದ್ದು ನಿಶ್ಚಿತಾರ್ಥಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಅಭಿಷೇಕ್ ಕೈ ಹಿಡಿಯುತ್ತಿರುವ ಹುಡುಗಿ ಮಾಡೆಲ್ ಎಂದು ಹೇಳಲಾಗುತ್ತಿದ್ದು, ಯಾರು ಎಂಬುದರ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಅರಮನೆ ಮೈದಾನದಲ್ಲಿ ನಡೆಯುವ ನಿಶ್ಚಿತಾರ್ಥ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರುಗಳು ಭಾಗವಹಿಸುವ ನಿರೀಕ್ಷೆ ಇದೆ.

- Advertisement -

Latest News

error: Content is protected !!