Wednesday, June 3, 2026
Homeತಾಜಾ ಸುದ್ದಿಅಭಿಷೇಕ್ ಅಂಬರೀಷ್, ಅವಿವಾ ವಿವಾಹಕ್ಕೆ ಭರ್ಜರಿ ಸಿದ್ಧತೆ

ಅಭಿಷೇಕ್ ಅಂಬರೀಷ್, ಅವಿವಾ ವಿವಾಹಕ್ಕೆ ಭರ್ಜರಿ ಸಿದ್ಧತೆ

- Advertisement -
- Advertisement -

ಬೆಂಗಳೂರು;  ಕಳೆದ ವರ್ಷ ಡಿಸೆಂಬರ್ 11ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಭಿಷೇಕ್ ಅಂಬರೀಷ್, ಅವಿವಾ ವಿವಾಹಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಜೂನ್ 5ರಂದು ಅಭಿಷೇಕ್ ಅಂಬರೀಷ್, ಅವಿವಾ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ. ಇದೀಗ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ.

ಜೂನ್​ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಶಾಸ್ತ್ರ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಸಾಕಷ್ಟು ಗಣ್ಯರು ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

- Advertisement -

Latest News

error: Content is protected !!