Tuesday, May 7, 2024
Homeತಾಜಾ ಸುದ್ದಿರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಹೇಳಿಕೆ: ತಮಿಳುನಾಡು ಜನರಲ್ಲಿ ಕ್ಷಮೆ ಕೇಳಿದ ಶೋಭಾ ಕರಂದ್ಲಾಜೆ

ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಹೇಳಿಕೆ: ತಮಿಳುನಾಡು ಜನರಲ್ಲಿ ಕ್ಷಮೆ ಕೇಳಿದ ಶೋಭಾ ಕರಂದ್ಲಾಜೆ

spot_img
- Advertisement -
- Advertisement -

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡಿದ್ದು, ಈ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.

ತಮಿಳುನಾಡಿನ ಜನತೆ ಕ್ಷಮೆ ಕೋರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ನನ್ನ ಮಾತುಗಳು ಪ್ರಕರಣದ ಬಗ್ಗೆ ಬೆಳಕು ಚೆಲ್ಲುವ ಉದ್ದೇಶ ಇದ್ದವೇ ಹೊರತು ಆರೋಪ ಹೊರಿಸುವ ಆಶಯ ಇರಲಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೂ ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿರುವುದನ್ನು ಗಮನಿಸಿದ್ದೇನೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಟೀಕೆಗಳು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರ ಬಗ್ಗೆ ಹೇಳಿರುವುದಾಗಿತ್ತು. ತಮಿಳುನಾಡಿನ ಎಲ್ಲರಿಗೂ, ನನ್ನ ಹೃದಯದಿಂದ ಕ್ಷಮೆಯನ್ನು ಕೇಳುತ್ತೇನೆ. ಇದಲ್ಲದೆ, ನಾನು ನನ್ನ ಹಿಂದಿನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ಶೋಭಾ ಕರಂದ್ಲಾಜೆ ಅವರು ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ, ‘ತಮಿಳುನಾಡಿನಿಂದ ಬಂದ ವ್ಯಕ್ತಿಯೊಬ್ಬ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ. ದೆಹಲಿಯಿಂದ ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ. ಕೇರಳದಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್‌ ಎರಚಿದ್ದ’ ಎಂದು ಮಂಗಳವಾರ ಹೇಳಿದ್ದರು.

- Advertisement -
spot_img

Latest News

error: Content is protected !!