Friday, June 5, 2026
HomeUncategorizedಮಂಗಳೂರು: 10 ವರ್ಷ ತಲೆಮರೆಸಿಕೊಂಡಿದ್ದ ಅತ್ಯಾಚಾರಿ ಆರೋಪಿ ಸೆರೆ!

ಮಂಗಳೂರು: 10 ವರ್ಷ ತಲೆಮರೆಸಿಕೊಂಡಿದ್ದ ಅತ್ಯಾಚಾರಿ ಆರೋಪಿ ಸೆರೆ!

- Advertisement -
- Advertisement -

ಮಂಗಳೂರು: 2011 ರಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬಜ್ಪೆ ಪೊಲೀಸರು ಮಂಗಳವಾರ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ-ಮೇಲಂತಬೆಟ್ಟು ನಿವಾಸಿ ಮನೋಜ್ ಬಿ. ಶೆಟ್ಟಿ ಎಂದು ಹೇಳಲಾಗಿದೆ. 2011ರ ಜೂನ್ 24ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚೂರು ನೀರುಡೆಯ 7ನೇ ತರಗತಿಯ ವಿದ್ಯಾರ್ಥಿನಿ ನಗರದ ಶಾಲೆಗೆ ತೆರಳುತ್ತಿದ್ದ ವೇಳೆಯಲ್ಲಿ ಆರೋಪಿ ಮನೋಜ್ ಶೆಟ್ಟಿ ಮತ್ತು ಆತನ ಸ್ನೇಹಿತ ದಿನೇಶ್ ಅಮೀನ್ ಎಂಬವರು ಬಾಲಕಿಯನ್ನು ಪುಸಲಾಯಿಸಿ ಆಟೋ ರಿಕ್ಷಾದಲ್ಲಿ ಮನೆಗೆ ಕರೆದೊಯಿದಿದ್ದು ಬಾಲಕಿಯ ಅತ್ಯಾಚಾರಗೈದಿದ್ದರು ಎಂದು ಹೇಳಲಾಗಿದೆ.

ಅಲ್ಲದೆ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಮಂಗಳೂರು ಉತ್ತರ ಉಪ ವಿಭಾಗದ ಈ ಹಿಂದಿನ ಎಸಿಪಿ ಪುಟ್ಟ ಮಾದಯ್ಯ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನಂತರ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ಮನೋಜ್ ಬಿ. ಶೆಟ್ಟಿ ವಿಚಾರಣೆಯ ಸಮಯ ನ್ಯಾಯಾಲಯದ ಎದುರು ಹಾಜರಾಗದೆ ತಲೆಮರೆಸಿಕೊಂಡಿದ್ದ. ವಿಚಾರಣೆ ನಡೆಸಿದ ನ್ಯಾಯಾಲಯವು 2ನೇ ಆರೋಪಿ ದಿನೇಶ್ ಅಮೀನ್ ಎಂಬಾತನಿಗೆ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಆರೋಪಿ ಮನೋಜ್ ಬಿ. ಶೆಟ್ಟಿ ಎಂಬಾತನು ವಿಚಾರಣೆಗೆ ಹಾಜರಾಗದೆ ಇರುವುದರಿಂದ ಆತನ ವಿರುದ್ಧ ‘ಎಲ್‌ಪಿಸಿ’ ವಾರೆಂಟ್ ಹೊರಡಿಸಲಾಗಿತ್ತು. ಆರೋಪಿ ಮನೋಜ್ ಶೆಟ್ಟಿ ಸುಮಾರು 10 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮತ್ತು ಮೇಲಂತಬೆಟ್ಟು ಎಂಬಲ್ಲಿ ತನ್ನ ಹೆಸರು ಮೋಹನ್ ಎಂಬುದಾಗಿ ಬದಲಾಯಿಸಿಕೊಂಡು ವಾಸಿಸುತ್ತಿದ್ದ ಎಂದು ಹೇಳಲಾಗಿದೆ. ಆರೋಪಿಯ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಆರೋಪಿಯನ್ನು ಬಂಧಿಸಿದ್ದಾರೆ.

ಬಜ್ಪೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ನಡೆದ ಪತ್ತೆ ಕಾರ್ಯದಲ್ಲಿ ಪಿಎಸ್‌ಐ ಪೂವಪ್ಪ ಹಾಗೂ ಅಪರಾಧ ಪತ್ತೆ ವಿಭಾಗದ ಎಎಸ್‌ಐ ರಾಮ ಪೂಜಾರಿ, ಸಿಬ್ಬಂದಿ ರಶೀದ್ ಶೇಖ್, ಸಿದ್ದಲಿಂಗಯ್ಯ ಹಿರೇಮಠ ಭಾಗವಹಿಸಿದ್ದರು.

- Advertisement -

Latest News

error: Content is protected !!