Tuesday, June 23, 2026
Homeಕರಾವಳಿಮಂಗಳೂರುಬೆಳ್ತಂಗಡಿ : ರೆಖ್ಯ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ರೆಖ್ಯ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ : ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಲೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ನಂಜುಂಡ ಮಾಗಡಿ ಎಂಬಾತನಾಗಿದ್ದಾನೆ.2017 ರಲ್ಲಿ  ರೆಖ್ಯಾ ಎಂಬಲ್ಲಿ ನಡೆದ  ದರೋಡೆ ಪ್ರಕರಣದ  ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ  ಪ್ರಕರಣದಲ್ಲಿ ಆರೋಪಿಯಾದ ಈತ ಕಳೆದ  ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ  ತಲೆಮರೆಸಿಕೊಂಡಿದ್ದ ಈತನನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ.13  ರಂದು  ನ್ಯಾಯಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -

Latest News

error: Content is protected !!