ಮಂಗಳೂರು : ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ 2008 ರಲ್ಲಿ NDPS(ಗಾಂಜಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸರಿಂದ ಬಂಧನವಾದ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನಂತರ ಆರೋಪಿ ವಿರುದ್ದ LPC NO-01/2014 ರಲ್ಲಿ ವಾರೆಂಟ್ ಜಾರಿಯಾಗಿತ್ತು. ಕಳೆದ 14 ವರ್ಷಗಳಿಂದ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಟಿ.ಇ. ಜೋಸೆಫ್(59) ನನ್ನು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಫೆ.21 ರಂದು ಮಂಗಳೂರು ಕರಾವಳಿ ಕಾವಲು ಪಡೆ ಪೊಲೀಸರ ತಂಡ ವಶಕ್ಕೆ ಪಡೆದು ನಂತರ ಮಂಗಳೂರು ನ್ಯಾಯಾಲಯಕ್ಕೆ ಫೆ.22 ರಂದು ಹಾಜರುಪಡಿಸಿದ್ದು, ನ್ಯಾಯಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿ ವಿರುದ್ಧ ಕೇರಳ ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (2005 ರಲ್ಲಿ) NDPS(ಗಾಂಜಾ)ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈ ಪ್ರಕರಣದಲ್ಲಿ ಜಾರಿಯಾದ ವಾರೆಂಟ್ ಗೆ ಪೊಲೀಸರಿಗೆ ಬೇಕಾಗಿದ್ದಾನೆ.
ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದ ಸಿಬ್ಬಂದಿ ಎಎಸ್ಐ ಅಶೋಕ್ ಮತ್ತು ವಿಜಯ ಸುವರ್ಣ ಆರೋಪಿ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.