Saturday, June 6, 2026
Homeಕರಾವಳಿಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಅಬೂಬಕರ್ ಪಲ್ಲಮಜಲು ಕೋವಿಡ್ ಗೆ ಬಲಿ

ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಅಬೂಬಕರ್ ಪಲ್ಲಮಜಲು ಕೋವಿಡ್ ಗೆ ಬಲಿ

- Advertisement -
- Advertisement -

ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್, ಮಂಗಳೂರು ಇದರ ಅಧ್ಯಕ್ಷ ಅಬೂಬಕರ್ ಪಲ್ಲಮಜಲು(48) ಕೊರೋನಾ ಸೋಂಕಿನಿಂದಾಗಿ ಇಂದು ಬೆಳಗ್ಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಪಲ್ಲಮಲಜು ಹಯಾತುಲ್ ಇಸ್ಲಾಂ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದ ಇವರು ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!