Thursday, June 4, 2026
Homeತಾಜಾ ಸುದ್ದಿಅಂದು ಹರ್ಷ..ಇಂದು ಪ್ರವೀಣ..ನಾಳೆ ನಾವು ಎಂದು ಆಕ್ರೋಶ: ಗೃಹಸಚಿವರ ನಿವಾಸಕ್ಕೆ ನುಗ್ಗಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರು:...

ಅಂದು ಹರ್ಷ..ಇಂದು ಪ್ರವೀಣ..ನಾಳೆ ನಾವು ಎಂದು ಆಕ್ರೋಶ: ಗೃಹಸಚಿವರ ನಿವಾಸಕ್ಕೆ ನುಗ್ಗಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರು: ಪ್ರತಿಭಟನೆ ವೇಳೆ ಪೊಲೀಸರ ಲಾಠಿಪ್ರಹಾರ

- Advertisement -
- Advertisement -

ಬೆಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಇತ್ತೀಚೆಗೆ ಕರಾವಳಿಯಲ್ಲಿ ನಡೆದ ಸರಣಿ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸರ್ಕಾರದ ಗಮನ ಸೆಳೆಯಲು ಎಬಿವಿಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಗೃಹ ಸಚಿವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಗೃಹ ಸಚಿವರ ನಿವಾಸ ಮುಂದೆ ಪ್ರತಿಭಟನೆ ನಡೆಸಲು ಬಿಡಲಿಲ್ಲ.

ಆಗ ಕಾರ್ಯಕರ್ತರು ಗೃಹ ಸಚಿವರ ಗೇಟ್ ತಳ್ಳಿ ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆಯೂ ನಡೆಯಿತು. ಸದ್ಯ ಬೆಂಗಳೂರಿನ ಜಯಮಹಲ್ ನಲ್ಲಿ ಗೃಹ ಸಚಿವರ ಮನೆ ಮುಂದೆ ಪರಿಸ್ಥಿತಿ ಬಿಗಡಾಯಿಸಿದೆ. ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಸ್ಥಳದಿಂದ ಬೇರೆಡೆಗೆ ಕರೆದೊಯ್ದಿದ್ದಾರೆ.

- Advertisement -

Latest News

error: Content is protected !!