Sunday, June 7, 2026
Homeಕರಾವಳಿಎಬಿವಿಪಿ ಬಂಟ್ವಾಳ ಶಾಖೆಯಿಂದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ "ಪತ್ರ ಚಳುವಳಿ"

ಎಬಿವಿಪಿ ಬಂಟ್ವಾಳ ಶಾಖೆಯಿಂದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ “ಪತ್ರ ಚಳುವಳಿ”

- Advertisement -
- Advertisement -

ಬಂಟ್ವಾಳ: ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವ್ಯಾಪಿಸಿದೆ.ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾಸೂಕ್ತ ಕಾನೂನನ್ನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ವತಿಯಿಂದ ರಾಜ್ಯಾದ್ಯಂತ ಪತ್ರ ಚಳುವಳಿಗೆ ಕರೆ ನೀಡಿದೆ.ಇದರ ಅಂಗವಾಗಿ ಇಂದು ಬಂಟ್ವಾಳ ಶಾಖೆ ವತಿಯಿಂದ ಬಿಸಿರೋಡು ಹಾಗೂ ಸಿದ್ದಕಟ್ಟೆ ಅಂಚೆ ಕಛೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಂಡಿತ್ತು.

ಈ ಜಾಲಕ್ಕೆ ಪ್ರಮುಖವಾಗಿ ಕಾಳೆಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ. ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ದ ಸಮರ ಸಾರಬೇಕೆಂದು ಎಬಿವಿಪಿ ಯು ಪತ್ರ ಚಳುವಳಿಯ ಮೂಲಕ ಆಗ್ರಹಿಸಲಾಯಿತು. ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಯಿತು.


ಚಳುವಳಿಯಲ್ಲಿ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ,ನಗರ ಕಾರ್ಯದರ್ಶಿ ಅಖಿಲಾಷ್,ಕಾಲೇಜು ಘಟಕದ ಅದ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ,ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ ,ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು

- Advertisement -

Latest News

error: Content is protected !!