Wednesday, May 15, 2024
Homeಕರಾವಳಿದ್ವಿತೀಯ ಸೆಮಿಸ್ಟರ್ ಕನ್ನಡ ಪರೀಕ್ಷೆಗೆ ಪ್ರಥಮ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ; ಮಂಗಳೂರು ವಿವಿ ವಿರುದ್ಧ...

ದ್ವಿತೀಯ ಸೆಮಿಸ್ಟರ್ ಕನ್ನಡ ಪರೀಕ್ಷೆಗೆ ಪ್ರಥಮ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ; ಮಂಗಳೂರು ವಿವಿ ವಿರುದ್ಧ ಎಬಿವಿಪಿ ಗರಂ

spot_img
- Advertisement -
- Advertisement -

ಮಂಗಳೂರು:  ವಿ.ವಿ. ಯ ಪರೀಕ್ಷೆಗಳು ಪ್ರಸ್ತುತ ನಡೆಯುತ್ತಿದ್ದಪ, ದ್ವಿತೀಯ ಸೆಮಿಸ್ಟರ್ ಕನ್ನಡ  ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡದೆ , ಒಂದನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯನ್ನು ನೀಡಿ , ನಿರ್ಲಕ್ಷ್ಯವಾಗಿ ವರ್ತಿಸಲಾಗಿದ್ದು, ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಎಬಿವಿಪಿ ತಪ್ಪಿತಸ್ಥರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಆಗ್ರಹಿಸಿದೆ.

ಮಂಗಳೂರು ವಿ.ವಿ ಯ ಪರೀಕ್ಷೆಗಳು ಪ್ರಾರಂಭವಾಗಿದ್ದು , ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ 2 ನೇ ಸೆಮಿಸ್ಟರ್ ನ ಕನ್ನಡ ಪರೀಕ್ಷೆಯು ವಿ.ವಿ ನೀಡಿದ ವೇಳಾಪಟ್ಟಿಯ ರೀತಿಯಾಗಿ ನಡೆಯಬೇಕಾಗಿತ್ತು. ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗಿ ಬಂದಿದ್ದರು. ಆದರೆ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಪರೀಕ್ಷಾಂಗ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರ ನಿರ್ಲಕ್ಷ್ಯದಿಂದಾಗಿ ಒಂದನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯನ್ನು ನೀಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಬರೆಯಲು ತಿಳಿಸಿ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ . ನಂತರ ವಿದ್ಯಾರ್ಥಿಗಳು ತಪ್ಪು ಪ್ರಶ್ನೆ ಪತ್ರಿಕೆಯನ್ನು ನೀಡಿರುವುದನ್ನು ಗುರುತಿಸಿ ದೂರು ನೀಡಿದ  ನಂತರ, ಈ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿ.ವಿ ಯಿಂದ  ಆದೇಶಿಸಿದ್ದಾರೆ .

- Advertisement -
spot_img

Latest News

error: Content is protected !!