Saturday, June 6, 2026
Homeಕರಾವಳಿಮಂಗಳೂರು: ಎಬಿವಿಪಿ ಕಾರ್ಯಕರ್ತರಿಂದ ವಿವಿ ಸಿಂಡಿಕೇಟ್ ಸಭೆಗೆ ಮುತ್ತಿಗೆ ಯತ್ನ; ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬ...

ಮಂಗಳೂರು: ಎಬಿವಿಪಿ ಕಾರ್ಯಕರ್ತರಿಂದ ವಿವಿ ಸಿಂಡಿಕೇಟ್ ಸಭೆಗೆ ಮುತ್ತಿಗೆ ಯತ್ನ; ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬ ವಿರೋಧಿಸಿ ಪ್ರತಿಭಟನೆ !

- Advertisement -
- Advertisement -

ಮಂಗಳೂರು: ಸ್ನಾತಕೊತ್ತರ ಮತ್ತು ಪದವಿ ಪರೀಕ್ಷೆಯ ಫಲಿತಾಂಶ ವಿಳಂಬ ಮಾಡಿರುವುದನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ‌ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿ ಆಡಳಿತ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನಾ ಸೋಮವಾರ ನಡೆದಿದೆ.

ವಿವಿ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಈ ವೇಳೆ ಪೊಲೀಸರ ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆದಿದೆ.

ಪ್ರತಿಭಟನೆ ನಿರತ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದ್ದು, ಇದೇ ವೇಳೆ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಎರಡು ದಿನಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಪ್ರಕಟಿಸುತ್ತೇವೆ ಎಂದು ಭರವಸೆ ನೀಡಿದರು.ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.

- Advertisement -

Latest News

error: Content is protected !!