Wednesday, June 3, 2026
Homeಕರಾವಳಿಮಂಗಳೂರುಮಂಗಳೂರು; ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ; ಎಬಿವಿಪಿ ಸಂಘಟನೆ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು; ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ; ಎಬಿವಿಪಿ ಸಂಘಟನೆ ಮಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಮಂಗಳೂರು; ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಸಂಘಟನೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.

ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಎಬಿವಿಪಿ ಸಂಘಟನೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆ ವಿರುದ್ದ ವಿಧ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ದಿಗಂತ್ ನಾಪತ್ತೆ ಪ್ರಕರಣದ ಹಿಂದೆ ಅನ್ಯಮತಿಯರ ಕೈವಾಡದ ಶಂಕೆ ಇದೆ ಎಂಬ ಆರೋಪಗಳಿದ್ದರು ಪೊಲೀಸ್ ಇಲಾಖೆ ಈ ಪ್ರಕಾರಣವನ್ನು ಗಂಭೀರವಾಗಿ ತೆಗೆದುಕೊಳ್ಳದೆ ಯಾವುದೇ ಸುಳಿವುಗಳನ್ನು ಪತ್ತೆ ಹಚ್ಚದಿರುವುದು ಖಂಡನಿಯ ಎಂದರು.


ಪೊಲೀಸ್ ಇಲಾಖೆ ಈ ವಿಷಯದ ಕುರಿತು ಪ್ರಶ್ನಿಸಿದ ಸಂದರ್ಭದಲ್ಲಿ ಕಲಾವಕಾಶಗಳನ್ನು ಕೇಳಿ ಸಮಯಕಳೆಯುವ ಪ್ರಯತ್ನವನ್ನು ಮಾಡುತ್ತಿದೆ, ಈಗಾಗಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ವಿಷಯಕ್ಕೆ ಸಂಬಂಧಪಟ್ಟಂತೆ ಪೊಲೀಸ್ ವರಿಷ್ಟಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಕ್ತ ತನಿಖೆಗಾಗಿ ಮನವಿ ನೀಡಿದ್ದು ಇನ್ನೂ ಯಾವುದೇ ಸುಳಿವು ಪತ್ತೆ ಮಾಡದಿರಿವುದು ಜನ ಸಾಮಾನ್ಯರು ಹಾಗೂ ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಮೇಲೆ ಇಟ್ಟಂತ ನಂಬಿಕೆಯನ್ನ ಕಳೆದುಕೊಳ್ಳುವ ಹಾಗೆ ಮಾಡಿದೆ ಎಂದು ಆರೋಪಿಸಿದರು.ಈ ಪ್ರಕರಣವನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿ, ಪಾರದರ್ಶಕ ತನಿಖೆ ನಡೆಸಬೇಕು ಒಂದು ವೇಳೆ ಪೊಲೀಸ್ ಇಲಾಖೆ ಇದರಲ್ಲಿ ವಿಫಲವಾದಲ್ಲಿ ಮತ್ತಷ್ಟು ತೀವ್ರ ಹೋರಾಟವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.

- Advertisement -

Latest News

error: Content is protected !!