Friday, June 5, 2026
Homeಕರಾವಳಿಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಎಸಿಬಿ ಬಲೆಗೆ

ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಎಸಿಬಿ ಬಲೆಗೆ

- Advertisement -
- Advertisement -

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯ ಪಾಲಿಕೆ ಇಂಜಿನಿಯರ್ ಅತಿಕ್ ರೆಹಮಾನ್ ಅವರು 3000/- ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಜಯಲಿಂಗಪ್ಪ ಎಂಬವರು ಎಸಿಬಿಗೆ ದೂರು ನೀಡಿದ್ದರು. ಅದರಂತೆ ಇಂದು ಸಂಜೆ ವೇಳೆಗೆ ಅತಿಕ್ ರೆಹಮಾನ್ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಎ.ಸಿ.ಬಿ ಪಶ್ಚಿಮ ವಲಯದ ಪೊಲೀಸ್ ಅಧೀಕ್ಷಕರಾದ.ಸಿ.ಎ ಸೈಮನ್ ಅವರ ಮಾರ್ಗದರ್ಶನದಲ್ಲಿ ಎಸಿಬಿ ಪೊಲೀಸ್ ಠಾಣೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಉಪಧೀಕ್ಷಕರಾದ ಕೆ.ಸಿ.ಪ್ರಕಾಶ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಗುರುರಾಜ್, ಶ್ಯಾಮ್ ಸುಂದರ್ ಹೆಚ್ ಎಂ ಹಾಗೂ ಸಿಬ್ಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ,ರಾಧಾಕೃಷ್ಣ ಡಿ.ಎ, ಉಮೇಶ್,ವೈಶಾಲಿ, ಗಂಗಣ್ಣ,ಆದರ್ಶ,ರಾಕೇಶ್, ಭರತ್, ಮೋಹನ್ ಸಾಲಿಯಾನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -

Latest News

error: Content is protected !!