Sunday, May 5, 2024
Homeತಾಜಾ ಸುದ್ದಿಅಕ್ರಮ ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ಜಮೀರ್‌ ಅಹಮ್ಮದ್‌ ಖಾನ್‌ ಮನೆ ಮೇಲೆ ಎಸಿಬಿ...

ಅಕ್ರಮ ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ಜಮೀರ್‌ ಅಹಮ್ಮದ್‌ ಖಾನ್‌ ಮನೆ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ

spot_img
- Advertisement -
- Advertisement -

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲೆ  ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜೆಡ್‌. ಜಮೀರ್‌ ಅಹಮ್ಮದ್‌ ಖಾನ್‌ ಮನೆ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ. ಐದು ಸ್ಥಳಗಳ ಮೇಲೆ ದಾಳಿಮಾಡಿ, ಶೋಧ ನಡೆಸುತ್ತಿದ್ದಾರೆ.

ಜಾರಿ ನಿರ್ದೇಶನಾಲಯ ನೀಡಿರುವ ವರದಿ ಆಧರಿಸಿ ಜಮೀರ್‌ ಅಹಮ್ಮದ್‌ ವಿರುದ್ಧ ಎಸಿಬಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದೆ. ತನಿಖೆಯ ಭಾಗವಾಗಿ ನಗರದ ಐದು ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದ ಸಮೀಪ ಇರುವ ಜಮೀರ್‌ ಅಹಮ್ಮದ್‌ ಅವರ ಮನೆ, ಸಿಲ್ವರ್‌ ಓಕ್‌ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌, ಸದಾಶಿವನಗರದಲ್ಲಿರುವ ಅತಿಥಿಗೃಹ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿಯಲ್ಲಿ ಶೋಧ ನಡೆಯುತ್ತಿದೆ. ಎಸಿಬಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

2021ರ ಆಗಸ್ಟ್‌ 5ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಮೀರ್‌ ಅಹಮ್ಮದ್‌ ಅವರ ಮನೆ, ಕಚೇರಿಗಳ ಮೇಲೆ ದಾಳಿಮಾಡಿ ಶೋಧ ನಡೆಸಿದ್ದರು.

ಅಕ್ಟೋಬರ್‌ನಲ್ಲಿ ಶಾಸಕರಿಗೆ ನೋಟಿಸ್‌ ಜಾರಿಮಾಡಿದ್ದ ತನಿಖಾ ಸಂಸ್ಥೆ, ದೆಹಲಿಗೆ ಕರೆಸಿಕೊಂಡು ವಿಚಾರಣೆಯನ್ನೂ ನಡೆಸಿತ್ತು. ಜಾರಿ ನಿರ್ದೇಶನಾಲಯ ಸಿದ್ಧಪಡಿಸಿರುವ ವರದಿಯ ಆಧಾರದಲ್ಲಿ ಜಮೀರ್‌ ಅಹಮ್ಮದ್‌ ವಿರುದ್ಧ ಎಸಿಬಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

- Advertisement -
spot_img

Latest News

error: Content is protected !!