Thursday, June 4, 2026
Homeಕರಾವಳಿಮಂಗಳೂರು ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕರಿಗೆ ಎಸಿಬಿ ಶಾಕ್

ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕರಿಗೆ ಎಸಿಬಿ ಶಾಕ್

- Advertisement -
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕರೊಬ್ಬರಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಶಾಕ್ ಕೊಟ್ಟಿದ್ದಾರೆ.  

ಮನಪಾ ನಗರ ಯೋಜನೆಗಳ ವಿಭಾಗದ ಕೆ.ವಿ. ಜಯರಾಜ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ವಶಕ್ಕೆ ಪಡೆದಿದ್ದಾರೆ.

ಜಯರಾಜ್ ಅವರ ಬಿಜೈ ಬಳಿ ಇರುವ ಮನೆ ಮೇಲೆ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ. ಇದರ ಜೊತೆಗೆ ಅವರ ಕಚೇರಿ, ನಗರದ ಪಡೀಲ್ ಬಳಿಯ ಜಯರಾಜ್ ತಂದೆಯ ಮನೆ, ಕೇರಳದಲ್ಲಿರುವ ಜಯರಾಜ್ ಪತ್ನಿಯ ಮನೆ ಮೇಲೂ ದಾಳಿ ನಡೆಸಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್‌ ಇನ್ಸ್‌ಪೆಕ್ಟರ್ ಗಳಾದ ಶ್ಯಾಂಸುಂದರ್‌, ಗುರುರಾಜ್‌ ಹಾಗೂ ಸಿಬ್ಬಂದಿ ಇದ್ದಾರೆ.

- Advertisement -

Latest News

error: Content is protected !!