Saturday, August 29, 2026
Homeಕರಾವಳಿಬಂಟ್ವಾಳ: ಸ್ಕೂಟರ್ ಗೆ ಕಂಟೈನರ್ ಲಾರಿ ಡಿಕ್ಕಿ, ಸ್ಕೂಟರ್ ಸವಾರರಿಗೆ ಗಾಯ

ಬಂಟ್ವಾಳ: ಸ್ಕೂಟರ್ ಗೆ ಕಂಟೈನರ್ ಲಾರಿ ಡಿಕ್ಕಿ, ಸ್ಕೂಟರ್ ಸವಾರರಿಗೆ ಗಾಯ

- Advertisement -
- Advertisement -

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಂಟೈನ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಗೆ ಗಾಯಗೊಂಡು ಆಸ್ಪತ್ರೆ ಗೆ ದಾಖಲಾದ ಘಟನೆ ಮಾಣಿಯಲ್ಲಿ ನಡೆದಿದೆ.

ಮಾಣಿ ಸಮೀಪದ ಸೇರಾ ನಿವಾಸಿ ಬಾಲಕೃಷ್ಣ ಪೂಜಾರಿ ಹಾಗೂ ಶೀನಪ್ಪ ಪೂಜಾರಿ ಗಾಯಗೊಂಡವರು.

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಕಂಟೈನ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿಯಾಗಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಇಬ್ಬರ ಕಾಲಿಗೆ ಗಾಯಗಳಾಗಿ ಪುತ್ತೂರು ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!