Saturday, June 6, 2026
Homeಅಪರಾಧಧರ್ಮಸ್ಥಳ : ರಸ್ತೆಯಲ್ಲಿ ಅಡ್ಡಲಾಗಿ ಬಿದ್ದ ಮರಕ್ಕೆ ಬೈಕ್ ಡಿಕ್ಕಿ : ಬೈಕ್‌ನಲ್ಲಿದ್ದ ಹೊಟೇಲ್ ಮಾಲೀಕ...

ಧರ್ಮಸ್ಥಳ : ರಸ್ತೆಯಲ್ಲಿ ಅಡ್ಡಲಾಗಿ ಬಿದ್ದ ಮರಕ್ಕೆ ಬೈಕ್ ಡಿಕ್ಕಿ : ಬೈಕ್‌ನಲ್ಲಿದ್ದ ಹೊಟೇಲ್ ಮಾಲೀಕ ಸ್ಥಳದಲ್ಲೇ ಸಾವು

- Advertisement -
- Advertisement -

ಬೆಳ್ತಂಗಡಿ : ಬೆಳಗ್ಗಿನ ಜಾವ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹೊಟೇಲ್ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ಬೆಳಗ್ಗಿನ ಜಾವ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದು , ಇದನ್ನು ಗಮನಿಸದ ಬೈಕ್ ಸವಾರ ಬೆಳಗ್ಗೆ ಸುಮಾರು 5:30 ರ ವೇಳೆಗೆ ತಮ್ಮ ಹೊಟೇಲ್ ಗೆ ಹೋಗುವಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಬೈಕ್ ಸವಾರ ಕನ್ಯಾಡಿ ಬಳಿ ಇರುವ ಹೊಟೇಲ್ ಮಾಲೀಕ ಬೆಳ್ತಂಗಡಿ ಓಡಿಲ್ನಾಳದ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ (42) ಎಂದು ತಿಳಿದುಬಂದಿದೆ.

ಅಪಘಾತದಿಂದ ಸಾವನ್ನಪ್ಪಿದ್ದ ಬಗ್ಗೆ ವಾಹನ ಸವಾರರಿಂದ 112 ಗೆ ಕರೆ ಬಂದಿದ್ದು , ಅವರು ತಕ್ಷಣ ಸ್ಥಳಕ್ಕೆ ಬಂದು ಬೆಳ್ತಂಗಡಿ ಸಂಚಾರಿ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿ ಆಂಬುಲೆನ್ಸ್ ತರಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

- Advertisement -

Latest News

error: Content is protected !!