Friday, May 10, 2024
Homeಕರಾವಳಿಹಾಸನ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಬೆಳ್ತಂಗಡಿ ಮೂಲದ ಸಹೋದರರಿಬ್ಬರು ಸೇರಿ ಮೂವರು ಸ್ಥಳದಲ್ಲೇ ಸಾವು

ಹಾಸನ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಬೆಳ್ತಂಗಡಿ ಮೂಲದ ಸಹೋದರರಿಬ್ಬರು ಸೇರಿ ಮೂವರು ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಹಾಸನ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ‌ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ದಿ.ಗಣಪ ಗೌಡರ ಮಕ್ಕಳಾದ ಅಣ್ಣ ಜಯಪ್ರಕಾಶ್(25) , ತಮ್ಮ ಯೋಗಿಶ್(23) ಸಾವನ್ನಪ್ಪಿದವರು. ಇನ್ನುಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸರು ಗುರುತನ್ನು ಪತ್ತೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಎ-19 ಎಂಜಿ 7021 ನಂಬರಿನ ಕ್ವಿಡ್ ಕಾರಿನಲ್ಲಿ ನಾಲ್ಕೂ ಜನ ಪ್ರಯಾಣ ಮಾಡಿದ್ದಾರೆ. ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೆ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!