- Advertisement -
- Advertisement -
ಹೆಬ್ರಿ: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಸೋಮೇಶ್ವರದಲ್ಲಿ ನಡೆದಿದೆ.
ಸೋಮೇಶ್ವರ ಪೆಟ್ರೋಲ್ ಬಂಕ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಶಿವರಾಜ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ.ಲಾರಿ ಕಾರ್ಮಿಕ ಶಿವರಾಜ್ ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ವೇಳೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಟಿಪ್ಪರ್ ಹರಿದಿದೆ.
ಮಲಗಿದ್ದ ಶಿವರಾಜ್ ಮೇಲೆಯೇ ಟಿಪ್ಪರ್ ಚಾಲಕ ಚಲಾಯಿಸಿಕೊಂಡು ಹೋಗಿದ್ದು ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದೆ.ಮೃತ ಶಿವರಾಜ್ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೊರ್ಲಿ ಕೊಪ್ಪ ನಿವಾಸಿ ಎಂದು ಹೇಳಲಾಗಿದೆ.
- Advertisement -