Thursday, June 4, 2026
Homeಕರಾವಳಿಬಂಟ್ವಾಳ: ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದಾಗ ಅಪಘಾತ: ತಂದೆ ಸಾವು, ನಾಲ್ವರಿಗೆ ಗಾಯ

ಬಂಟ್ವಾಳ: ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದಾಗ ಅಪಘಾತ: ತಂದೆ ಸಾವು, ನಾಲ್ವರಿಗೆ ಗಾಯ

- Advertisement -
- Advertisement -

ಬಂಟ್ವಾಳ: ಎರಡು ಕಾರುಗಳು ಮಧ್ಯೆ ಅಪಘಾತವಾಗಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಬಂಟ್ವಾಳದ ಮಾಣಿ ಸಮೀಪ ಬುಡೋಳಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಮೃತರನ್ನು ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಎಂದು ಗುರುತಿಸಲಾಗಿದೆ. ಇವರ ಜೊತೆಗಿದ್ದ ಪ್ರಜ್ವಲ್ (22), ನಾರಾಯಣ, ಮಂಜುನಾಥ ಹಾಗೂ ರಘುಚಂದ್ರ ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ಷ್ಮಣ ಆಚಾರಿ ತನ್ನ ಪುತ್ರಿಯ ವಿವಾಹ ಆಮಂತ್ರಣ ಪತ್ರ ನೀಡುವುದಕ್ಕಾಗಿ ಬೆಂಗಳೂರಿನಿಂದ ಊರಿಗೆ ಆಗಮಿಸುತ್ತಿದ್ದರೆನ್ನಲಾಗಿದೆ. ಕಾರನ್ನು ಪ್ರಜ್ವಲ್ ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!