Monday, June 30, 2025
Homeಕರಾವಳಿಉಡುಪಿಉಡುಪಿ ಭೀಕರ ಅಪಘಾತ: ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ತರಕಾರಿ ಟೆಂಪೋ, ಸ್ಥಳದಲ್ಲೇ ಇಬ್ಬರ ಸಾವು

ಉಡುಪಿ ಭೀಕರ ಅಪಘಾತ: ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ತರಕಾರಿ ಟೆಂಪೋ, ಸ್ಥಳದಲ್ಲೇ ಇಬ್ಬರ ಸಾವು

spot_img
- Advertisement -
- Advertisement -

ಉಡುಪಿ, ಜೂ.18: ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರಾ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ನಡೆದಿದೆ.
ಮೃತರನ್ನು ಕುಂದಾಪುರ ಮೂರುಕೈ ನಿವಾಸಿ ಚಾಲಕ ದಿನೇಶ್ (37) ಹಾಗೂ ಮಂಜುನಾಥ್(26) ಎಂದು ಗುರುತಿಸಲಾಗಿದೆ.

ದಿನೇಶ್ ಕೆಲವು ಸಮಯದಿಂದ ತನ್ನ ವಾಹನದಲ್ಲಿ ತರಕಾರಿ ವ್ಯಾಪಾರ ನಡೆಸುತ್ತಿದ್ದು, ಅದಕ್ಕಾಗಿ ರಖಂ ದರದಲ್ಲಿ ತರಕಾರಿ ಖರೀದಿಸಲು ಕುಂದಾಪುರದಿಂದ ಆದಿಉಡುಪಿ ಎಪಿಎಂಸಿ ಮಾರುಕಟ್ಟೆಗೆ ತನ್ನೊಂದಿಗೆ ಕೆಲಸ ಮಾಡುವ ಮಂಜು ನಾಥ್ ಜೊತೆ ಹೋಗುತ್ತಿದ್ದರೆನ್ನಲಾಗಿದೆ.

ಈ ವೇಳೆ ನಿದ್ದೆಗಣ್ಣಿನಿಂದ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿ ಹಾಕಲಾದ ಸೂಚನ ಫಲಕದ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ವಾಹನ ಎದುರಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಇದರ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರ ಪೈಕಿ ದಿನೇಶ್ ಸ್ಥಳದಲ್ಲಿಯೇ ಮೃತಪಟ್ಟರೆ, ಮಂಜುನಾಥ್ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ

ದಿನೇಶ್‌ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮಂಜುನಾಥ್ ಅವಿವಾಹಿತರಾಗಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!