Tuesday, November 17, 2026
Homeಕರಾವಳಿಮೀನು ಸಾಗಾಟದ ವಾಹನ ಮತ್ತು ಲಾರಿ ನಡುವೆ ಅಪಘಾತ; ಢಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ...

ಮೀನು ಸಾಗಾಟದ ವಾಹನ ಮತ್ತು ಲಾರಿ ನಡುವೆ ಅಪಘಾತ; ಢಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ಜಖಂ

- Advertisement -
- Advertisement -

ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪದ ಅಮೃತೇಶ್ವರಿ ದೇವಸ್ಥಾನದ ಯೂಟರ್ನ್ ಬಳಿ ಮೀನು ಸಾಗಾಟದ ಇನ್ಸುಲೇಟರ್ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಮೀನು ಸಾಗಾಟದ ವಾಹನ ಏಕಾಏಕಿ ಬಲಕ್ಕೆ ತಿರುಗುತ್ತಿದ್ದ ವೇಳೆ ಬ್ರಹ್ಮಾವರದಿಂದ ಕುಂದಾಪುರದತ್ತ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಪ್ರದೇಶದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೆಲವೇ ದಿನಗಳ ಹಿಂದೆ ಇಬ್ಬರು ಮೃತಪಟ್ಟಿದ್ದರು. ಅವೈಜ್ಞಾನಿಕ ಯೂಟರ್ನ್ ವ್ಯವಸ್ಥೆಯೇ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಕ್ಷಣ ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!