Saturday, June 6, 2026
Homeತಾಜಾ ಸುದ್ದಿಉಪ್ಪಿನಂಗಡಿ: ಆಲ್ಟೋ ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ

ಉಪ್ಪಿನಂಗಡಿ: ಆಲ್ಟೋ ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ

- Advertisement -
- Advertisement -

ಉಪ್ಪಿನಂಗಡಿ: ಆಲ್ಟೋ ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ 34ನೇ ನೆಕ್ಕಿಲಾಡಿ ಎಂಬಲ್ಲಿ ಶುಕ್ರವಾರದಂದು ಮಧ್ಯಾಹ್ನ ನಡೆದಿದೆ.

ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ಹಾಗೂ ವಿರುದ್ದ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಆಲ್ಟೋ ಕಾರಿನ ನಡುವೆ ಪರಸ್ಪರ ಅಪಘಾತ ಸಂಭವಿಸಿದ್ದು, ಪರಿಣಾಮ ರಿಕ್ಷಾ ಕಂದಕಕ್ಕೆ ಉರುಳಿದೆ.

ಗಾಯಗೊಂಡ ಇಬ್ಬರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!