Wednesday, July 15, 2026
Homeಕರಾವಳಿಮಂಗಳೂರುಪುತ್ತೂರು; ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಪುತ್ತೂರು; ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

- Advertisement -
- Advertisement -

ಪುತ್ತೂರು; ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಜಲ್ಪಡ್ಪುವಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ.ಜಮೀಲಾ(49)  ಹಾಗೂ ತಮ್ಸಿರ್(5)  ಮೃತರು. ಆಟೋ ಚಾಲಕ ಕೆದಂಬಾಡಿ ಗ್ರಾಮದ ಮಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದಾರೆ.

 ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಆಟೋದಲ್ಲಿದ್ದ ಜಮೀಲಾ(49) ಮತ್ತು ತಮ್ಸಿರ್(5) ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!