Friday, June 5, 2026
Homeಕರಾವಳಿಬೆಳ್ತಂಗಡಿಯಲ್ಲಿ ಆಟೋ ಹಾಗೂ ಮಿನಿ ಬಸ್ ನಡುವೆ ಅಪಘಾತ:ರಿಕ್ಷಾ ಚಾಲಕ ಸಾವು

ಬೆಳ್ತಂಗಡಿಯಲ್ಲಿ ಆಟೋ ಹಾಗೂ ಮಿನಿ ಬಸ್ ನಡುವೆ ಅಪಘಾತ:ರಿಕ್ಷಾ ಚಾಲಕ ಸಾವು

- Advertisement -
- Advertisement -

ಬೆಳ್ತಂಗಡಿ: ಆಟೋ ರಿಕ್ಷಾ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಬೆಳ್ತಂಗಡಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಶಿರ್ತಾಡಿಯ ಆಟೋರಿಕ್ಷಾ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಎರಡು ವಾಹನಗಳ ನಡುವೆ ಸಿಲುಕಿದ್ದು, ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ.

ಮೃತದೇಹವನ್ನು ವಾಹನದಿಂದ ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿರಿಸಿ, ಬಳಿಕ ಕುಟಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

- Advertisement -

Latest News

error: Content is protected !!