Wednesday, June 3, 2026
Homeಕರಾವಳಿಕಾರ್ಕಳ : ನಿಂತಿದ್ದ ಬಸ್‌ಗೆ ಬೈಕ್‌ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ನಿಂತಿದ್ದ ಬಸ್‌ಗೆ ಬೈಕ್‌ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಕಾರ್ಕಳ : ನಿಂತಿದ್ದ ಬಸ್‌ಗೆ ಬೈಕ್‌ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರ್ಗಾನ ಚರ್ಚ್‌ ಬಳಿ ನಿನ್ನೆ ರಾತ್ರಿ ನಡೆದಿದೆ. ಹಿರ್ಗಾನ ಗ್ರಾಮದ ಕಾನಂಗಿ ಬಳಿಯ ಅಂಕರಬೆಟ್ಟು ನಿವಾಸಿ ಮನೋಹರ್‌ (43) ಮೃತ ದುರ್ದೈವಿ.

ಕಾರ್ಕಳದಿಂದ ಹೋಗುತ್ತಿದ್ದ ಖಾಸಗಿ ಬಸ್ ಚಾಲಕ ಹಿರ್ಗಾನ ಚರ್ಚ್‌ ಬಳಿ ಪ್ರಯಾಣಿಕರನ್ನು ಇಳಿಸಲು ಬಸ್‌ ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬೈಕ್‌ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮನೋಹರ್‌ ಅವರು ಈ ತಿಂಗಳು ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಲಿದ್ದರು. ಹೀಗಾಗಿ ಫೆ.28ರಂದು ಮಂಗಳೂರಿನಲ್ಲಿ ಮೆಡಿಕಲ್‌ ಚೆಕ್‌ಅಪ್‌ ಮಾಡಿಸಿದ್ದರು. ಅದರ ರಿಪೋರ್ಟ್‌ ತರಲು ಬುಧವಾರ ಮಂಗಳೂರಿಗೆ ತೆರಳಿದ್ದು ಅಲ್ಲಿಂದ ವಾಪಾಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

Latest News

error: Content is protected !!