Thursday, July 16, 2026
Homeಕರಾವಳಿಮಂಗಳೂರು:ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವು

ಮಂಗಳೂರು:ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವು

- Advertisement -
- Advertisement -

ಮಂಗಳೂರು:ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಫರಂಗೀಪೇಟೆ ಸಮೀಪದ ಅರ್ಕುಳ ದ್ವಾರದ ಬಳಿ ಇಂದು ನಡೆದಿದೆ.

ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಮೃತ ದುರ್ದೈವಿ. ಹಂಝ ಮಂಗಳೂರು ಕಡೆಯಿಂದ ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ.

ಈ ವೇಳೆ ಹಂಝ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಇದೇ ಬೈಕ್ ನಲ್ಲಿ ಹಂಝ ಅವರ ಪತ್ನಿ ಹಾಗೂ ಅವರ ಮಗು ಇದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ

- Advertisement -

Latest News

error: Content is protected !!