Wednesday, June 3, 2026
Homeಕರಾವಳಿಪುತ್ತೂರು: ಮಗನನ್ನು ಬೆಂಗಳೂರು ಬಸ್ ಗೆ ಬಿಡಲು ಹೋಗುವಾಗ ಅಪಘಾತ: ತಂದೆ ಸಾವು, ಮಗನಿಗೆ ಗಂಭೀರ...

ಪುತ್ತೂರು: ಮಗನನ್ನು ಬೆಂಗಳೂರು ಬಸ್ ಗೆ ಬಿಡಲು ಹೋಗುವಾಗ ಅಪಘಾತ: ತಂದೆ ಸಾವು, ಮಗನಿಗೆ ಗಂಭೀರ ಗಾಯ

- Advertisement -
- Advertisement -

ಪುತ್ತೂರು: ಮಗನನ್ನು ಬೆಂಗಳೂರು ಬಸ್ ಬಿಡಲು ತೆರಳುತ್ತಿದ್ದ ವೇಳೆ ಅಪಘಾತವಾಗಿ ತಂದೆ ಸಾವನ್ನಪ್ಪಿ, ಮಗ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಕುಂಬ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ.ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಮೃತ ದುರ್ದೈವಿ.

ರಘುರಾಮ ಶೆಟ್ಟಿಯವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲು ಮನೆಯಿಂದ ಬೈಕ್ ನಲ್ಲಿ ಬರುತ್ತಿದ್ದ ವೇಳೆ ವಿರುದ್ಧ ಡಿಕ್ಕಿನಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶೀನಪ್ಪ ಎಂಬವರು ಚಲಾಯಿಸುತ್ತಿದ್ದ ಮಾರುತಿ ಓಮ್ನಿ ನಡುವೆ ತಿಂಗಳಾಡಿ ರಸ್ತೆಯ ಕುಂಬ್ರ ಸಮೀಪ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಘುನಾಥ ಶೆಟ್ಟಿ ಮತ್ತು ಸಹ ಸವಾರ ಅವರ ಪುತ್ರ ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಘುರಾಮ ಶೆಟ್ಟಿ ಅವರು ಮೃತಪಟ್ಟಿದ್ದಾರೆ. ರಘುರಾಮ ಶೆಟ್ಟಿಯವರ ಪುತ್ರನ ಕಾಲು ಮುರಿತಕ್ಕೊಳಗಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!