- Advertisement -
- Advertisement -
ಕಾಸರಗೋಡು: ಬೈಕ್ ಮತ್ತು ಲಾರಿ ಮಧ್ಯೆ ಅಪಘಾತವಾಗಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ದೈವ ಕೋಲ ನರ್ತಕನಾಗಿದ್ದು, ಕಾಞ೦ಗಾಡ್ ಆನಂದಾಶ್ರಮ ಸಮೀಪದ ಸೂರಜ್ ಪಣಿಕ್ಕರ್ (45) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿ ಪಡನ್ನಕ್ಕಾಡ್ ಸಮೀಪ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಹೊಸದುರ್ಗ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -