Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಸ್ಕೂಟರ್‌ ಮತ್ತು ಬೈಕ್‌ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು

ಬೆಳ್ತಂಗಡಿ: ಸ್ಕೂಟರ್‌ ಮತ್ತು ಬೈಕ್‌ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು

- Advertisement -
- Advertisement -

ಬೆಳ್ತಂಗಡಿ: ಸ್ಕೂಟರ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಭಾರತ್‌ ಆಟೋ ಕಾರ್‌ ಶೋ ರೂಂ ಬಳಿ ನಡೆದಿದೆ.

ಉಜಿರೆಯಿಂದ ಚಾರ್ಮಾಡಿ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟರ್‌ ಸವಾರ ಸರಸ್ವತಿ ಮೆಸ್‌ ಮಾಲಕ ಜಯಂತ್‌ (56) ಭಾರತ್‌ ಶೋರೂಂ ಬಳಿ ಅಜಿತ್‌ ನಗರ ರಸ್ತೆಗೆ ತಿರುಗಿಸುವ ವೇಳೆ ಅನುಗ್ರಹದಿಂದ ಉಜಿರೆ ಕಡೆಗೆ ಪ್ರಯಾಣ ಮಾಡುತ್ತಿದ್ದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್‌ ಸವಾರನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.08 ರಂದು ಮೃತಪಟ್ಟಿದ್ದಾರೆ.

ಬೈಕ್‌ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!