Wednesday, May 15, 2024
Homeತಾಜಾ ಸುದ್ದಿಬೈಕ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ - ಬೈಕ್ ಸವಾರ ಸಾವು

ಬೈಕ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು

spot_img
- Advertisement -
- Advertisement -

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜ.16 ರ ಭಾನುವಾರ ಬೆಳಿಗ್ಗೆ ನಗರದ ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆದಿದೆ. ಮೃತರನ್ನು ನುಳ್ಳಿ ಪ್ಪಾಡಿ ಯ ಅಬ್ದುಲ್ ಮಜೀದ್ (42) ಎಂದು ಗುರುತಿಸಲಾಗಿದೆ.

ನಗರದ ಹೊಸ ಬಸ್ಸು ನಿಲ್ದಾಣ ಪರಿಸರದ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಜೀದ್’ರನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಕಾಸರಗೋಡು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!