- Advertisement -
![]()
- Advertisement -
ಬೆಳ್ತಂಗಡಿ: ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿಯ ಮದ್ದಡ್ಕ ಪೇಟೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ.
ಬೈಕಿಗೆ ಡಿಕ್ಕಿ ಹೊಡೆದು ಟೆಂಪೋ ಮಗುಚಿ ಬಿದ್ದಿದೆ. ಈ ವೇಳೆ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.
- Advertisement -


