- Advertisement -
![]()
- Advertisement -
ಉಡುಪಿ: ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ ವಾಹನಕ್ಕೆ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೈಂದೂರು ತಾಲೂಕಿನ ಕಂಬದಕೋಣೆ ಹಳಗೇರಿ ತೆಂಕಬೆಟ್ಟಿನ ನಿವಾಸಿ ಸತೀಶ್ ಜೋಗಿ(42) ಮೃತ ದುರ್ದೈವಿ. ಸಹ ಸವಾರ ಆಕಾಶ್ ಜೋಗಿ (17) ಗಂಭೀರ ಗಾಯಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


