Wednesday, May 15, 2024
Homeಕರಾವಳಿಉಡುಪಿಕಾಪು: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ- ಬೈಕ್ ಸವಾರ ಸಾವು

ಕಾಪು: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ- ಬೈಕ್ ಸವಾರ ಸಾವು

spot_img
- Advertisement -
- Advertisement -

ಕಾಪು: ಇನ್ನಂಜೆ‌-ಕಲ್ಲುಗುಡ್ಡೆ ರಸ್ತೆಯಲ್ಲಿ ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ.

ಇನ್ನಂಜೆ‌ – ಕಲ್ಲುಗುಡ್ಡೆ– ಬಂಟಕಲ್‌ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಟಿಪ್ಪರ್ ನ ಹಿಂಬದಿ ಚಕ್ರದಡಿ ಸಿಲುಕಿದ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಅಪಘಾತಕ್ಕೊಳಗಾದ ಬೈಕ್ ಮತ್ತು ಟಿಪ್ಪರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!