Thursday, July 23, 2026
Homeಕರಾವಳಿಉಪ್ಪಿನಂಗಡಿ : ಬೈಕ್ ಹಾಗೂ ಟ್ರಾಕ್ಟರ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ : ಬೈಕ್ ಹಾಗೂ ಟ್ರಾಕ್ಟರ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಉಪ್ಪಿನಂಗಡಿ : ಇಲ್ಲಿನ ಹಳೇಗೇಟು ಎಂಬಲ್ಲಿ ಬೈಕ್ ಹಾಗೂ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.

ಕಾಣಿಯೂರು ಬೆಂಗಾಯ ನಿವಾಸಿ ಭುವನೇಶ್ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.ಕಡಬ ಕಡೆಯಿಂದ ಬರುತ್ತಿದ್ದ ಟ್ರಾಕ್ಟರ್ ಗೆ ವಿರುದ್ದ ದಿಕ್ಕಿನಿಂದ ಬಂದ ಬೈಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!