Monday, May 6, 2024
Homeಕರಾವಳಿಬೆಳ್ತಂಗಡಿ : ಸವಣಾಲು ಎರಡು ಬೈಕ್ ಗಳ ನಡುವೆ ಅಪಘಾತ: ಬೈಕ್  ಓರ್ವ ಸ್ಥಳದಲ್ಲಿಯೇ ಸಾವು,...

ಬೆಳ್ತಂಗಡಿ : ಸವಣಾಲು ಎರಡು ಬೈಕ್ ಗಳ ನಡುವೆ ಅಪಘಾತ: ಬೈಕ್  ಓರ್ವ ಸ್ಥಳದಲ್ಲಿಯೇ ಸಾವು, ಇನ್ನೊಬ್ಬರಿಗೆ ಗಂಭೀರ ಗಾಯ

spot_img
- Advertisement -
- Advertisement -

ಬೆಳ್ತಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಇನ್ನೋರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ ಇಂದು (ಮಾರ್ಚ್ 30) ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ಡ್ರಿ ಡಿಸೋಜಾ(62) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸಾವನ್ನಪ್ಪಿದ ಹೆನ್ಡ್ರಿ ಡಿಸೋಜಾ ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ. ಸಾವನ್ನಪ್ಪಿದ ಹೆನ್ಡ್ರಿ ಡಿಸೋಜಾ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ..

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

- Advertisement -
spot_img

Latest News

error: Content is protected !!