Saturday, October 17, 2026
Homeಕರಾವಳಿಮಂಗಳೂರುಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸ್ಕೂಟರ್ ಸವಾರ ಮೃತ್ಯು

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸ್ಕೂಟರ್ ಸವಾರ ಮೃತ್ಯು

- Advertisement -
- Advertisement -

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಕಿನ್ನಿಗೋಳಿ ಉಲ್ಲಂಜೆ ರಸ್ತೆಯ ರಾಮ ಮಂದಿರದ ಸಮೀಪ ನಡೆದಿದೆ. ಪಲಿಮಾರು ನಿವಾಸಿ ರವೀಂದ್ರ ಮೃತಪಟ್ಟ ಸ್ಕೂಟರ್ ಸವಾರ.

ಮತ್ತೋರ್ವ ಸ್ಕೂಟರ್‌ ಸವಾರ ಕಿನ್ನಿಗೋಳಿ ನಿವಾಸಿ ಕುಮಾರ್‌ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಲಿಮಾರ್‌ನಿಂದ ಕಿನ್ನಿಗೋಳಿ – ಕಟೀಲು ಉಳ್ಳಂಜೆ ರಸ್ತೆ ಮೂಲಕ ಎಕ್ಕಾರು ಕಡೆಗೆ ಸಂಚರಿಸುತ್ತಿದ್ದ ಸ್ಕೂಟರ್‌ಗೆ ಕಟೀಲು ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಸ್ಕೂಟರ್‌ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರೂ ಸ್ಕೂಟರ್‌ ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಒಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎರಡೂ ದ್ವಿಚಕ್ರ ವಾಹನಗಳು ಜಖಂಗೊಂಡಿದೆ. ಘಟನೆಯ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!