Thursday, June 4, 2026
Homeಕರಾವಳಿಉಪ್ಪಿನಂಗಡಿ: ಬೈಕ್ ಹಾಗೂ ದ್ವಿಚಕ್ರ ನಡುವೆ ಡಿಕ್ಕಿ, ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಬೈಕ್ ಹಾಗೂ ದ್ವಿಚಕ್ರ ನಡುವೆ ಡಿಕ್ಕಿ, ಇಬ್ಬರಿಗೆ ಗಾಯ

- Advertisement -
- Advertisement -

ಉಪ್ಪಿನಂಗಡಿ: ಬೈಕ್ ಹಾಗೂ ದ್ವಿಚಕ್ರ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೆಗೇಟು ಬಳಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಮಹೇಶ (37) ಹಾಗೂ ಇನ್ನೋರ್ವ ಬೈಕ್ ಸವಾರ ಬನ್ನೂರು ನಿವಾಸಿ ಬಿಜು ಕುಮಾರ್ (47) ಗಾಯಗೊಂಡಿದ್ದಾರೆ.ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಈ ಸಂದರ್ಭ ಸವಾರರು ರಸ್ತೆಗೆಸೆಯಲ್ಪಟ್ಟು, ಗಾಯಗೊಂಡಿದ್ದಾರೆ.

ಮಹೇಶ್ ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದು, ಗಂಭೀರ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಹಾಗೂ ಬಿಜು ಕುಮಾರ್ ರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!