Wednesday, June 3, 2026
Homeಉತ್ತರ ಕನ್ನಡಹೊನ್ನಾವರ; KSRTC ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ; ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಹೊನ್ನಾವರ; KSRTC ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ; ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

- Advertisement -
- Advertisement -

ಹೊನ್ನಾವರ; KSRTC ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶರಾವತಿ ಸೇತುವೆ ಮೇಲೆ ನಡೆದಿದೆ.
ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ ಸಂಶಿ(25) ಹಾಗೂ ರಮೇಶ್ ನಾಯ್ಕ ಕರ್ವನಕುರ್ವ(22) ಮೃತರು.

ವಿಜಾಪುರದಿಂದ ಮಂಗಳೂರು ಕಡೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್, ಹಾಗೂ ಮಂಕಿ ಕಡೆಯಿಂದ ಹೊನ್ನಾವರದ ಕಡೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!