Saturday, June 6, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟ್ ನಲ್ಲಿ ಬಸ್- ಲಾರಿ ನಡುವೆ ಅಪಘಾತ: ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ...

ಚಾರ್ಮಾಡಿ ಘಾಟ್ ನಲ್ಲಿ ಬಸ್- ಲಾರಿ ನಡುವೆ ಅಪಘಾತ: ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಟ

- Advertisement -
- Advertisement -

ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ವ್ಯಾಪ್ತಿಗೆ ಬರುವ ಚಾರ್ಮಾಡಿ ಘಾಟ್   ಅಣ್ಣಪ್ಪ ಸ್ವಾಮಿ ದೇವಸ್ಥಾನದ ಮುಂದೆ ಬಸ್ ಮತ್ತು ಲಾರಿ ನಡುವೆ ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಬಸ್ ಕಂದಕಕ್ಕೆ ಬಿದ್ದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಅಪಘಾತದಿಂದ ಎರಡು ಗಂಟೆಗಳಿಂದ ವಾಹನಗಳು ಸಂಚಾರ ಬಂದ್ ಆಗಿ ಸಾಲುಗಟ್ಟಿ ನಿಂತಿದ್ದು ವಾಹನ  ಸವಾರರು ಪರದಾಡುವಂತಾಗಿದೆ. ಇನ್ನೂ ಲಾರಿ- ಬಸ್ ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ಅಗಮಿಸಿ ತೆರವು ಕಾರ್ಯಾಚರಣೆ  ನಡೆಸುತ್ತಿದ್ದಾರೆ.

- Advertisement -

Latest News

error: Content is protected !!