Friday, June 5, 2026
Homeಕರಾವಳಿಉಡುಪಿಕಾರ್ಕಳದಲ್ಲಿ ಬಸ್ ಹಾಗೂ ಟಿಪ್ಪರ್ ಮಧ್ಯೆ ಭೀಕರ ಅಪಘಾತ

ಕಾರ್ಕಳದಲ್ಲಿ ಬಸ್ ಹಾಗೂ ಟಿಪ್ಪರ್ ಮಧ್ಯೆ ಭೀಕರ ಅಪಘಾತ

- Advertisement -
- Advertisement -

ಕಾರ್ಕಳ; ಬಸ್ ಹಾಗೂ ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬಸ್ ಚಾಲಕ ಗಂಭೀರ ಗಾಯಗೊಂಡ ಘಟನೆ ಕಾರ್ಕಳದ ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಉಡುಪಿ ಯಿಂದ ಕಾರ್ಕಳ ಕಡೆ ಬರುತ್ತಿದ್ದ ಖಾಸಗಿ ಬಸ್ಸೊಂದು  ಕೆ ಎಸ್ ಆರ್ ಟಿ ಸಿ ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಲಾಯಿಸಿ ಬಂದು ಬಸ್ರಿ ಶಾಲಾ ತಿರುವಿನಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸು ಚಾಲಕ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ. ಪ್ರಯಾಣಿಕರು ಹಾಗೂ ಟಿಪ್ಪರ್ ಚಾಲಕ ಸಣ್ಣಪುಟ್ಟ ರೀತಿಯಲ್ಲಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!