Thursday, June 4, 2026
Homeತಾಜಾ ಸುದ್ದಿಶಿವಮೊಗ್ಗ ; ಎರಡು ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಮೂವರಿಗೆ...

ಶಿವಮೊಗ್ಗ ; ಎರಡು ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶ್ರೀನಿವಾಸ ಮತ್ತು ಲಕ್ಷ್ಮಿ ಹೆಸರಿನ ಖಾಸಗಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದೆ. ಇಬ್ಪರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.. 5ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೋರಡಿ ಸಮೀಪದ ಕುಮದ್ವತಿ ನದಿಯ ಸೇತುವೆ ಮೇಲೆ ನಡೆದ ಅಪಘಾತ ಸಂಭವಿಸಿದ್ದು, ಅಪಘಾತವಾದ ರಭಸಕ್ಕೆ ಇಡೀ ಬಸ್‌ಗಳ ಅರ್ಧ ಭಾಗವೇ ಸಂಪೂರ್ಣ ನಜ್ಜುಗುಜ್ಜಾಗಿವೆ. ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

- Advertisement -

Latest News

error: Content is protected !!