- Advertisement -
![]()
- Advertisement -
ಮಂಗಳೂರು : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಡೆದಿದೆ.
ಮಂಗಳೂರಿನ ಕದ್ರಿ ನಿವಾಸಿ ಸಂದೇಶ್ (27) ಘಟನೆ ಯಲ್ಲಿ ಮೃತಪಟ್ಟ ದುರ್ದೈವಿ. ತನ್ನ ಬೈಕ್‌ನಲ್ಲಿ ಸಂದೇಶ್ ಬಜ್ಪೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡದಿದ್ದು,ಇದರ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ಲಾರಿ ಹರಿದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


