Thursday, June 25, 2026
Homeಕರಾವಳಿಉಡುಪಿಉಡುಪಿ;ಸೈಕಲಿಗೆ ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಸಾವು

ಉಡುಪಿ;ಸೈಕಲಿಗೆ ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಸಾವು

- Advertisement -
- Advertisement -

ಉಡುಪಿ;ಸೈಕಲಿಗೆ ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಮಾಬುಕಳ ಬಳಿ‌ ನಡೆದಿದೆ. ಹರಿಶ್ಚಂದ್ರ (49) ಮೃತ ಸೈಕಲ್ ಸವಾರ.

ಪರಿಚಯದವರ ಗೃಹಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ಮಾಬುಕಳ ಜಂಕ್ಷನ್ ಬಳಿ ಸೈಕಲ್ ನಲ್ಲಿ ಬರುತ್ತಿದ್ದಾಗ ಅತೀ ವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದ ಕಾರೊಂದು ಸೈಕಲ್ಲಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಆಗ ಸೈಕಲ್ ಸವಾರ ಹರಿಶ್ಚಂದ್ರ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!