Sunday, June 7, 2026
Homeತಾಜಾ ಸುದ್ದಿಕಾರ್ಕಳ: ಕಾರು ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ - ಇಬ್ಬರು ಗಂಭೀರ ಗಾಯ

ಕಾರ್ಕಳ: ಕಾರು ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ – ಇಬ್ಬರು ಗಂಭೀರ ಗಾಯ

- Advertisement -
- Advertisement -

ಕಾರ್ಕಳ: ಕಾರು ಹಾಗೂ ಆಟೋರಿಕ್ಷಾ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಚರ್ಚ್ ಬಳಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ.

ಗಾಯಗೊಂಡ ಆಟೋ ಚಾಲಕ ಶೇಖರ್ ಮಡಿವಾಳ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!